ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ಕರೆಂಟ್ ಕಣ್ಣಾ ಮುಚ್ಚಾಲೆ ವಿರುದ್ಧ ಹೆಬ್ರಿಯಲ್ಲಿ ಪ್ರತಿಭಟನೆ!

ಹೆಬ್ರಿ: ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಕಣ್ಣಾ ಮುಚ್ಚಾಲೆ ವಿರುದ್ಧ ಜನರ ಆಕ್ರೋಶದ ಕಟ್ಟೆ ಒಡೆದಿದೆ.ಮಳೆಗಾಲಕ್ಕೆ ನಿತ್ಯ ವಿದ್ಯುತ್ ನಿಲುಗಡೆ ಹಾಗೂ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಇನ್ನು, ಮೆಸ್ಕಾಂ ಜನ ಸಾಮಾನ್ಯರಿಗೆ ಆಗುವ ತೊಂದರೆಯನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ ಹೆಬ್ರಿ ಪೇಟೆಯಲ್ಲಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಯಿತು.

ಹೆಬ್ರಿ ಸಿಟಿ ಲಯನ್ಸ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಶ್ರೀಕಾಂತ ಪೂಜಾರಿ ಕುಟ್ಟೂರು, ಪ್ರವೀಣ್ ಚಂದ್ರ ಮೂಡುಬಿದಿರೆ, ರಮೇಶ್ ಕುಂದಾಪುರ ಮಾತನಾಡಿದರು.

ನಂತರ ಅರಣ್ಯ ಇಲಾಖೆ ಕಚೇರಿಗೆ ತೆರಳಿ ವಲಯ ಅರಣ್ಯಾಧಿಕಾರಿ ಮತ್ತು ಮೆಸ್ಕಾಂ ಅಧಿಕಾರಿಗಳಿಗೆ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಮನವಿ ನೀಡಲಾಯಿತು.ಪ್ರತಿಭಟನೆಯಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

21/07/2022 03:32 pm

Cinque Terre

5.16 K

Cinque Terre

0

ಸಂಬಂಧಿತ ಸುದ್ದಿ