ಬ್ರಹ್ಮಾವರ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಇಡಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.
ಬ್ರಹ್ಮಾವರದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಭಟನೆಗೂ ಮುನ್ನ ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ನಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.ಮೆರವಣಿಗೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು, ಕಾರ್ಯಕರ್ತರು ಭಾಗಿಯಾದರು.
ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ಯು.ಟಿ.ಖಾದರ್ ಗಾಂಧಿ ಕುಟುಂಬದ ಕೊಡುಗೆ ಈ ದೇಶಕ್ಕೆ ಅಪಾರವಾದದ್ದು.ಕಾಂಗ್ರೆಸ್ ಪಕ್ಷ ಜನಸಾಮಾನ್ಯರ ದನಿಯಾಗಿ ಕೆಲದ ಮಾಡುತ್ತಿದೆ.ಇದನ್ನು ಸಹಿಸದ ಕೇಂದ್ರ ಬಿಜೆಪಿ ಸರಕಾರ ಸೋನಿಯಾ ಗಾಂಧಿಯವರಿಗೆ ತನಿಖಾ ಸಂಸ್ಥೆಗಳ ಮೂಲಕ ಕಿರುಕುಳ ನೀಡುತ್ತಿದೆ ಎಂದುಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ಅಭಯಚಂದ್ರ ಜೈನ್ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
22/07/2022 12:27 pm