ಕಾರ್ಕಳ: ವಿಪಕ್ಷ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯರು ನೀಡಿದ ಅರ್ಜಿಗಳನ್ನು ಫಲಾನುಭವಿಗಳ ಪಟ್ಟಿಯನ್ನು ಸೇರಿಸದೇ ಕಡೆಗಣಿಸಲಾಗಿದೆ ಎಂದು ಆರೋಪಿಸಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಅಡಳಿತ ಪಕ್ಷದ ನಿಲುವು ಖಂಡಿಸಿ ಸಾಮಾನ್ಯ ಸಭೆಯ ಬಾವಿಗಿಳಿದು ಧರಣಿ ನಡೆಸಿದರು.
ಕಾರ್ಕಳ ಪುರಸಭಾಧ್ಯಕ್ಷೆ ಸುಮಾ ಕೇಶವ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಮಾಸಿಕ ಸಾಮಾನ್ಯ ಸಭೆಯ ಆರಂಭದಲ್ಲೇ ವಿಪಕ್ಷ ಸದಸ್ಯ ಶುಭದ ರಾವ್ ಮಾತನಾಡಿ, ಪರಿಶಿಷ್ಟ ಜಾತಿ ಸಮುದಾಯದವರ ಹಳೆಮನೆ ದುರಸ್ತಿಗಾಗಿ ಬಂದ ಅರ್ಜಿಗಳ ಪೈಕಿ 12 ಅರ್ಜಿಗಳನ್ನು ಪರಿಗಣಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಬಳಿಕ ಪುರಸಭಾ ಸದಸ್ಯರ ಗಮನಕ್ಕೆ ತರದೇ ಏಕಾಎಕಿ ಒಬ್ಬರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿದ್ದು ಖಂಡನೀಯ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಆಕ್ಷೇಪಿಸಿದಾಗ ಇದಕ್ಕೆ ಉಳಿದ ಸದಸ್ಯರಾದ ಅಶೋಕ್ ಅಹಮ್ಮದ್, ಪ್ರತಿಮಾ ರಾಣೆ, ನಳಿನಿ ಆಚಾರ್ಯ ಮುಂತಾದವರು ದನಿಗೂಡಿಸಿದರು. ಇದಕ್ಕೆ ಸಮುದಾಯ ಸಮನ್ವಯಾಧಿಕಾರಿ ಮಲ್ಲಿಕಾ ಉತ್ತರಿಸಿ, ಸಮರ್ಪಕ ದಾಖಲೆ ನೀಡದ ಹಿನ್ನಲೆಯಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದರು. ಇದಕ್ಕೆ ಕೆರಳಿದ ವಿಪಕ್ಷ ಸದಸ್ಯರು,ದಾಖಲೆಗಳು ಇಲ್ಲ ಎನ್ನುವ ಕಾರಣಕ್ಕೆ ಅರ್ಜಿಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ. ಅಲ್ಲದೇ ಇಂತಹ ವಿಚಾರಗಳನ್ನು ಸಭೆಯ ಗಮನಕ್ಕೆ ತರಬೇಕು ಎಂದು ಆಗ್ರಹಿಸಿ ಸದನದ ಬಾವಿಗೆ ಇಳಿದು ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೀಶ್ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗಿಶ್ ಮ್ಯಾನೇಜರ್ ಸೂರ್ಯಕಾಂತ್ ಖಾರ್ವಿ, ಸೋಮನಾಥ ನಾಯ್ಕ ಉಪಸ್ಥಿತರಿದ್ದರು.
Kshetra Samachara
26/07/2022 09:02 pm