ಮಂಗಳೂರು: ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ ಎಂದು ಸಂಸದ ತೇಜಸ್ವಿ ಸೂರ್ಯರ ಹೇಳಿಕೆ ಅವರ ಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ .
ಸಮಾಜದಲ್ಲಿ ಶೇ 1ರಷ್ಟಿರುವ ಘಾತುಕ ಶಕ್ತಿಗಳನ್ನು ಮಟ್ಟಹಾಕಿದರೆ ಬಾಕಿ ಇರುವ ಶೇ.99ರಷ್ಟು ಜನರಲ್ಲಿ ಧೈರ್ಯ ಹಾಗೂ ವಿಶ್ವಾಸ ಮೂಡಲಿದೆ. ಅದನ್ನು ಬಿಟ್ಟು ಭದ್ರತೆ ನೀಡಲು ಸಾಧ್ಯವೇ ಎಂದು ಆಡಳಿತ ಪಕ್ಷದವರಾಗಿ ಪ್ರಶ್ನೆ ಮಾಡಿರುವುದು ನಿಮ್ಮ ಅಸಮರ್ಥತೆ ಹಾಗೂ ಅಸಹಾಯಕತೆಯನ್ನು ತೋರಿಸುತ್ತದೆ. ಜನರು ಇದೆಲ್ಲವನ್ನೂ ಗಮನಿಸುತ್ತಿದ್ದಾರೆ ನೆನಪಿರಲಿ ಎಂದು ಖಾದರ್ ಎಚ್ಚರಿಕೆ ನೀಡಿದ್ದಾರೆ.
PublicNext
28/07/2022 04:11 pm