ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ಕುಟುಂಬಕ್ಕೆ 25 ಲಕ್ಷ ಚೆಕ್ ನೀಡಿದ ಸಿಎಂ ಬೊಮ್ಮಾಯಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ

ಪ್ರವೀಣ್ ನೆಟ್ಟಾರು ಕುಟಂಬಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ್ರು. ಜೊತೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಹಣಕಾಸಿ ನೆರವು ನೀಡಿದ್ದಾರೆ.

ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ. ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕೇರಳದ ಗಡಿಯಲ್ಲೇ ಹತ್ಯೆ ನಡೆದಿರೋ ಕಾರಣ ಇದು ವ್ಯವಸ್ಥಿತ ಕೊಲೆ ಎನ್ನಬಹುದು. ಹಲವಾರು ವರ್ಷಗಳಿಂದ ಹೀಗೆ ಕರಾವಳಿ ಪ್ರದೇಶದಲ್ಲಿ ಕೊಲೆಗಳು ನಡೆಯುತ್ತಿರೋ ಪರಿಣಾಮ ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ನಾವು ಪ್ರವೀಣ್ ಹತ್ಯೆ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸೋಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಹತ್ಯೆ ಹಿಂದೆ ಯಾವುದೇ ಸಂಘಟನೆ ಇದ್ದರೂ ಬಂಧಿಸುತ್ತೇವೆ. ನಮ್ಮ ಸರ್ಕಾರ ಮತ್ತು ಪಕ್ಷದಿಂದ ಪ್ರವೀಣ್ ಮನೆಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಭರವಸೆ ನೀಡಿದರು.

Edited By : Nirmala Aralikatti
PublicNext

PublicNext

28/07/2022 07:59 pm

Cinque Terre

35.38 K

Cinque Terre

12

ಸಂಬಂಧಿತ ಸುದ್ದಿ