ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಿದರು.
ಈ ಸಂದರ್ಭ ಪ್ರವೀಣ್ ಅವರ ತಂದೆ-ತಾಯಿ, ಪತ್ನಿ ಹಾಗೂ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳು ಸಾಂತ್ವನ ಹೇಳಿದರು. ಕುಟುಂಬಕ್ಕೆ ಎಲ್ಲ ನೆರವು ನೀಡುವುದಾಗಿ ಅವರು ತಿಳಿಸಿದರು.
ಸಂಜೆ ಮಂಗಳೂರಿಗೆ ಬಂದ ಸಿಎಂ, ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ನಾಯಕರಾದ ಸಿ.ಟಿ ರವಿ, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮತ್ತಿತರರು ಉಪಸ್ಥಿತರಿದ್ದರು.
PublicNext
28/07/2022 08:24 pm