ಉಡುಪಿ: ನಮಗೂ ಮೀಸಲಾತಿ ಕಲ್ಪಿಸಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಮಹಾಸಭಾದ ಯುವಮುಖಂಡ ಜಿ.ಮನೋಹರ್ ಅಬ್ಬಿಗೆರೆ, ರಾಜ್ಯದಲ್ಲಿ ಕಳೆದ 60 ವರ್ಷಗಳಿಂದ ವೀರಶೈವ ಲಿಂಗಾಯತ ಸಮುದಾಯವು ರಾಜ್ಯದ ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ್ದರೂ, ಈ ವರ್ಗವನ್ನು ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಗೆ ಸೇರಿಸದೇ ಇರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.
ಈ ಸವಲತ್ತುಗಳನ್ನು ಪಡೆಯುವ ಸಲುವಾಗಿ ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಒಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಆಗಸ್ಟ್ ಒಂದು, ಸೋಮವಾರದಂದು ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದೆ. ಈ ಬಹಿರಂಗ ಸಭೆಯಲ್ಲಿ ಪ್ರಮುಖ ಮಠಾಧೀಶರು, ಸಮಾಜದ ಮುಖಂಡರು ಸಭೆಯನ್ನುದ್ದೇಶಿಸಿ ಮಾತನಾಡುವವರಿದ್ದಾರೆ ಎಂದಿದ್ದಾರೆ.
Kshetra Samachara
30/07/2022 07:02 pm