ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಕಠಿಣ ಕ್ರಮ ಕೈಗೊಳ್ಳುವಲ್ಲಿ ನಮ್ಮ ಸರಕಾರ ಎಡವಿದೆ: ಡಿ.ವಿ ಸದಾನಂದ ಗೌಡ

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ ನೀಡಿದರು.

ಮೃತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.

ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಡಿ.ವಿ ಸದಾನಂದ ಗೌಡ ಅವರು ಈ ಹಿಂದೆ ಹಲವು ಕೊಲೆಗಳು ನಡೆದಾಗ ಕಠಿಣ ಕ್ರಮ ಕೈಗೊಳ್ಳುವಲ್ಲಿ ನಮ್ಮ ಸರಕಾರ ಎಡವಿದೆ ಎಂದು ಪ್ರಾಮಾಣಿಕವಾಗಿ ಹೇಳುತ್ತೇನೆ. ಪೊಲೀಸರಿಗೆ ಪ್ರವೀಣ್ ಅವರು ತನಗೆ ಬೆದರಿಕೆ ಇರುವ ಬಗ್ಗೆ ಹೇಳಿದ್ದಾರೆ ಎನ್ನಲಾಗಿದೆ. ಅದು ನಿಜವೇ ಆಗಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಆರೋಪಿಗಳು ರಾಜ್ಯದ ಹಾಗೂ ದೇಶದ ಯಾವುದೇ ಮೂಲೆಯಲ್ಲಿರಲಿ ಅವರನ್ನು ಹಿಡಿದೇ ಹಿಡಿಯುತ್ತೇವೆ. ಪ್ರವೀಣ್ ಮನೆಯವರು ಹೇಳುವಂತೆ ಮುಂದೆ ಇಂತಹ ಘಟನೆಗಳು ಆಗದಿರಲು ಏನು ಮಾಡಬೇಕು ಅದನ್ನು ಮಾಡಿಯೇ ಮಾಡುತ್ತೇವೆ ಎಂದು ಡಿ.ವಿ ಸದಾನಂದ ಗೌಡ ಹೇಳಿದರು.

Edited By : Nagesh Gaonkar
PublicNext

PublicNext

30/07/2022 07:37 pm

Cinque Terre

67.66 K

Cinque Terre

17

ಸಂಬಂಧಿತ ಸುದ್ದಿ