ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಂಡಳಿ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ಮುಖಂಡರು ಉಪಸ್ಥಿತರಿದ್ದರು.
Kshetra Samachara
02/08/2022 08:50 pm