ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಬಿಜೆಪಿ-ಸಂಘ ಪರಿವಾರ ಜನರ ಸ್ವಾತಂತ್ರ್ಯಕ್ಕೆ ಧಕ್ಕೆ: ಮಯೂರ್ ಜಯಕುಮಾರ್

ಕಾಪು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ಹಮ್ಮಿ ಹಮ್ಮಿಕೊಳ್ಳಲಾಯಿತು. ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಜಾಥವನ್ನು ಉದ್ಘಾಟಿಸಿ ಮಾತನಾಡಿ, 75ರ ಸ್ವಾತಂತ್ರ್ಯ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ನಮ್ಮ ಹಿರಿಯರ ಮತ್ತು ಕಾಂಗ್ರೆಸ್ ಪಕ್ಷದ ತ್ಯಾಗ ಬಲಿದಾನದಿಂದ ದೊರೆತ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ.

ಆದರೆ ಇಂದು ನಮ್ಮ ಸ್ವಾತಂತ್ರ್ಯ ಅಪಾಯದಲ್ಲಿದೆ ಕಾಂಗ್ರೆಸ್ ಪಕ್ಷ ಹಾಗೂ ನಮ್ಮ ಹಿರಿಯರು, ತ್ಯಾಗ ಬಲಿದಾನಗಳ ಪಡೆದ ಸ್ವಾತಂತ್ರ್ಯವನ್ನು ಬಿಜೆಪಿ ಮತ್ತು ಸಂಘ ಪರಿವಾರಗಳು ಕಸಿದು ಕೊಳ್ಳುತ್ತಿವೆ. ಬಿಜೆಪಿ ಸರಕಾರದ ಆಡಳಿತದಿಂದ ಎಲ್ಲಾ ಕಡೆಗಳಲ್ಲಿ ಜನರು ಸಂಕಷ್ಟದಲ್ಲಿರುವ ಈ ಹೊತ್ತಿನಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಬರಬೇಕಾದ ಅಗತ್ಯವಿದ್ದು, ಇದಕ್ಕಾಗಿ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಧ್ರುವ ನಾರಾಯಣ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್, ಮಾಜಿ ಸಚಿವ ಅಭಯ್ ಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಮಂಜುನಾಥ್ ಭಂಡಾರಿ, ನವೀನ್ ಚಂದ್ರ ಶೆಟ್ಟಿ, ನವೀನ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

05/08/2022 01:37 pm

Cinque Terre

5.74 K

Cinque Terre

0

ಸಂಬಂಧಿತ ಸುದ್ದಿ