ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ರಾಷ್ಟ್ರ ಧ್ವಜಾರೋಹಣ ಮಾಡಲು ಹೊರಟವರಿಗೆ ಕಾಂಗ್ರೆಸ್‌ ಗುಂಡು ಹಾರಿಸಿತ್ತು: ಸಚಿವ ಸುನಿಲ್ !

ಕಾರ್ಕಳ: ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಮುಂದಾದವರ ಮೇಲೆ ಗುಂಡು ಹಾರಾಟ ನಡೆದಿತ್ತು. ಈ ಘಟನೆ ಮರೆತಿರುವ ಕಾಂಗ್ರೆಸ್‌ ಮುಖಂಡರು ಅಮೃತ ಮಹೋತ್ಸವ ವೇಳೆ ಕಾಲ್ನಡಿಗೆ ಜಾಥಾ ನಡೆಸಿ ಬಿಜೆಪಿಯನ್ನು ಟೀಕಿಸುತ್ತಿರುವುದು ಆ ಪಕ್ಷದ ಇಬ್ಬಗೆ ನೀತಿಗೆ ಸಾಕ್ಷಿ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್‌ ಹೇಳಿದ್ದಾರೆ.

ಕಾರ್ಕಳದಲ್ಲಿ ಅಮೃತಮಹೋತ್ಸವ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಇಂದು ಬಿಜೆಪಿ`ಆಡಳಿತವನ್ನು ಪ್ರಶ್ನಿಸುತ್ತಿದೆ. ಕಾಂಗ್ರೆಸ್‌ಗೆ ರಾಷ್ಟ್ರಧ್ವಜದ ಬಗ್ಗೆ ಗೌರವವಿಲ್ಲ. ಸಂವಿಧಾನವನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿ ಅಗೌರವ ತೋರಿದೆ. ಅಭಿವೃದ್ಧಿ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದರು. ಸ್ವಾತಂತ್ರ್ಯದ ಬಳಿಕ 3 ಯುದ್ಧಗಳು ಸಂಭವಿಸಿವೆ. ಕಾಂಗ್ರೆಸ್‌ ಅಧಿಕಾರದ್ದಲ್ಲಿದ್ದಾಗ ನಡೆದ ಯುದ್ಧಗಳಲ್ಲಿ ಸೋಲು ಅನುಭವಿಸುವ ಸ್ಥಿತಿ ಎದುರಾಗಿತ್ತು. ಬಿಜೆಪಿ ಅಧಿಕಾರಲ್ಲಿದ್ದಾಗ ಕಾರ್ಗಿಲ್ ಯುದ್ಧ ನಡೆಯಿತು. ಒಂದಿಂಚು ಭೂಮಿಯನ್ನೂ ನಾವು ಬಿಟ್ಟು ಕೊಟ್ಟಿಲ್ಲ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

08/08/2022 11:25 am

Cinque Terre

18.47 K

Cinque Terre

3

ಸಂಬಂಧಿತ ಸುದ್ದಿ