ಬೈಂದೂರು: ಕಾಲುಸಂಕದಿಂದ ಬಿದ್ದು ಹೊಳೆಯಲ್ಲಿ ಕೊಚ್ಚಿ ಹೋದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗೆ ಸನ್ನಿಧಿ ಮನೆಗೆ ಭೇಟಿ ನೀಡಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ನನ್ನ ಅವಧಿಯಲ್ಲಿಯೂ ಬೋಳಂಬಳ್ಳಿ ಪ್ರದೇಶಕ್ಕೆ ಕಾಲುಸಂಕ ಮಾಡಿಕೊಡುವಲ್ಲಿ ವಿಫಲನಾಗಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಆದರೆ ಆದ್ಯತೆಯ ಮೇಲೆ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಅಗ್ನಿಶಾಮಕದಳ, ಮುಳುಗು ತಜ್ಞರು ಸನ್ನಿಧಿಗಾಗಿ ಶೋಧ ಮುಂದುವರೆಸಿದ್ದಾರೆ.
Kshetra Samachara
10/08/2022 09:04 am