ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾಮಾಜಿಕ ಹೋರಾಟ ಹತ್ತಿಕ್ಕಲು ಪೊಲೀಸರಿಂದ ಸುಳ್ಳು ಕೇಸು; ಆರ್ ಟಿಐ ಕಾರ್ಯಕರ್ತ ಆರೋಪ

ಉಡುಪಿ: ನನ್ನ ಸಾಮಾಜಿಕ ಹೋರಾಟವನ್ನು ಹತ್ತಿಕ್ಕಲು ಹಣದ ಆಮಿಷ, ರಾಜಕೀಯ ಒತ್ತಡ ಬಳಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ದೂರು ಕೊಟ್ಟವರು ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದು ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಂಕರ್ ಶಾಂತಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2021 ಜ. 3ರ ಬೆಳಿಗ್ಗೆ ನಾನು ವ್ಯಕ್ತಿಯೋರ್ವರ ಮನೆಗೆ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದೇನೆ ಎಂದು ಸುಳ್ಳು ಆರೋಪ ಹೊರಿಸಲಾಗಿದೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿರುವ ಬಗ್ಗೆ 3-4 ತಿಂಗಳವರೆಗೆ ನನ್ನ ಗಮನಕ್ಕೆ ಬಂದಿಲ್ಲ. ಪೊಲೀಸರು ನನ್ನನ್ನು ಕೊಲೆಗೆ ಯತ್ನಿಸಿದ ಪ್ರಮುಖ 3 ನೇ ಆರೋಪಿಯೊಂದಿಗೆ ಶಾಮೀಲಾಗಿ ನನ್ನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದರು.

ನಾನು ಯಾವುದೇ ತಪ್ಪನ್ನೂ ಮಾಡಿಲ್ಲ. ಧರ್ಮಸ್ಥಳದಲ್ಲಿ ಬಂದು ಆಣೆ ಪ್ರಮಾಣ ಮಾಡುವೆ. ಅವರು ಸತ್ಯ ಪ್ರಮಾಣಕ್ಕೆ ಬರಲಿ. ಈ ಪ್ರಕರಣದಲ್ಲಿ ನನಗೆ ನ್ಯಾಯ ಸಿಗದೇ ಹೋದರೆ ಸಿಎಂ ಬೊಮ್ಮಾಯಿ, ಗೃಹ ಸಚಿವರ ಮನೆ ಮುಂದೆ ಧರಣಿ ನಡೆಸುತ್ತೇನೆ ಎಂದು ಎಚ್ಚರಿಸಿದರು.

Edited By : Shivu K
Kshetra Samachara

Kshetra Samachara

12/08/2022 08:30 pm

Cinque Terre

11.89 K

Cinque Terre

1

ಸಂಬಂಧಿತ ಸುದ್ದಿ