ಕಾಪು : ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಕಾಪು ಪೇಟೆಯಲ್ಲಿ ಆಯೋಜಿಸಲಾಗಿದ್ದ ವಂದೇ ಮಾತರಂ ತಿರಂಗಾ ಕಾಲ್ನಡಿಗೆ ಜಾಥಾಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ದೇಶದಾದ್ಯಂತ ಮೂರು ದಿನಗಳ ಕಾಲ ಘರ್ ಘರ್ ತಿರಂಗಾ - ಹರ್ ಘರ್ ತಿರಂಗಾ ಕಾರ್ಯಕ್ರಮ ನಡೆಯಲಿದ್ದು ಎಲ್ಲೆಡೆ ಹಬ್ಬದ ರೀತಿಯಲ್ಲಿ ಸಂಭ್ರಮ ಮತ್ತು ಸಡಗರದೊಂದಿಗೆ ಆಚರಿಸಲಾಗುತ್ತಿದೆ.
ತಿರಂಗಾಕ್ಕೆ ಪಕ್ಷವಿಲ್ಲ, ಪಕ್ಷ ರಾಜಕೀಯದ ಹೊರತಾಗಿ ಎಲ್ಲಾ ಕಡೆಗಳಲ್ಲೂ ಇಂದು ತಿರಂಗಾ ರಾರಾಜಿಸುತ್ತಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/08/2022 10:02 pm