ಸುಳ್ಯ: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ವೈಕುಂಠ ಸಮಾರಾಧನೆ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮ ಪೆರುವಾಜೆಯ ಜೆ.ಡಿ. ಅಡಿಟೋರಿಯಂನಲ್ಲಿ ನಡೆಯಿತು.
ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಸೇವಾ ಪ್ರಮುಖ್ ಸುಭಾಶ್ಚಂದ್ರ ಕಳಂಜ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್, ಬೆಳ್ಳಾರೆಯ ಬಿಜೆಪಿ ಮುಖಂಡ ಆರ್.ಕೆ.ಭಟ್ ಕುರುಂಬುಡೇಲು ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯೆ ಭವ್ಯ ನುಡಿ ನಮನ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಷ್ಟ್ರೀಯ ಸ್ವಯಂ ಸೇವ ಸಂಘದ ಮುಖಂಡರಾದ ನ.ಸೀತಾರಾಮ, ಚಂದ್ರಶೇಖರ ತಳೂರು ಮೊದಲಾದವರು ಉಪಸ್ಥಿತರಿದ್ದರು.
ಪ್ರವೀಣ್ ಅವರ ಸಹೋದರಿಯರ ಮಕ್ಕಳು ಹಾಡಿನ ಮೂಲಕ ಮಾವನನ್ನು ನೆನೆಪಿಸಿಕೊಂಡರು. ಸುಚಿನ್ ವೈಯಕ್ತಿಕ ಗೀತೆ ಹಾಡಿದರು. ಶಿವಪ್ರಸಾದ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು.
Kshetra Samachara
15/08/2022 09:38 am