ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾವರ್ಕರ್ ಅವಹೇಳನ ಖಂಡಿಸಿ ಕಾರ್ಕಳದಲ್ಲಿ ಹಿಂದೂ ಸಂಘಟನೆಗಳಿಂದ ಮಾನವ ಸರಪಳಿ ಅಭಿಯಾನ

ಕಾರ್ಕಳ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ರಾಜಕೀಯ ವ್ಯಕ್ತಿಗಳು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡು ಅವಹೇಳನ ಮಾಡುತ್ತಿರುವುದು ಖಂಡನೀಯ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸದಸ್ಯ ರಮೇಶ್ ಕಲ್ಲೊಟ್ಟೆ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದವರು ನಮಗೆ ಸ್ವಾತಂತ್ರ್ಯ ಕೇವಲ ಶಾಂತಿಯಿಂದ ಸಿಕ್ಕಿಲ್ಲ ಬದಲಾಗಿ ಸಾವಿರಾರು ಹೋರಾಟಗಾರರ ಬಲಿದಾನದಿಂದ ಸಿಕ್ಕಿದೆ ಆದರೆ ಕ್ರಾಂತಿಯಿಂದ ಸ್ವಾತಂತ್ರ್ಯವನ್ನು ಪಡೆದವರ ಹೆಸರನ್ನು ಮರೆಮಾಚಿ ಇತಿಹಾಸವನ್ನು ತಿರುಚಿ ಬರೆಯಲಾಗಿದೆ. ಆದರೆ ಸುಳ್ಳು ಇತಿಹಾಸವನ್ನು ನಂಬುವ ಕಾಲ ಇದಲ್ಲ ಪ್ರಜ್ಞಾವಂತ ನಾಗರಿಕರಿಗೆ ಸತ್ಯ ಏನು ಎನ್ನುವುದು ಅರಿವಾಗಿದೆ ಎಂದರು.

ಸ್ವಾತಂತ್ರ್ಯಕ್ಕಾಗಿ ಕರಿನೀರಿನ ಶಿಕ್ಷೆ 15 ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸಿದ ವೀರ ಸಾವರ್ಕರ್ ಅವರ ಆದರ್ಶಗಳನ್ನು ಯುವಜನತೆ ರೂಢಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಹಿಂದೂ ಯುವ ವಾಹಿನಿ ಸಂಯೋಜಕ್ ರಿಕೇಶ್ ಪಾಲನ್, ಜಿಲ್ಲಾ ಹಿಂದೂ ಜಾಗರಣ ವೇದಿಕೆ ಸಂಯೋಜಕ ಉಮೇಶ್ ಸೂಡ, ತಾಲೂಕು ಹಿಂದೂ ಜಾಗರಣ ವೇದಿಕೆ ಗುರು ಪ್ರಸಾದ್ ನಾರಾವಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಮುಂತಾದವರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

20/08/2022 03:14 pm

Cinque Terre

6.05 K

Cinque Terre

0

ಸಂಬಂಧಿತ ಸುದ್ದಿ