ಮುಲ್ಕಿ ಶಿಕ್ಷಣದಲ್ಲಿ ಪ್ರಥಮ ಸ್ಥಾನದಲ್ಲಿದ್ದ ದ.ಕ.ಜಿಲ್ಲೆ ಇಂದು ಕೋಮು ಸಂಘರ್ಷದಿಂದಾಗಿ ಕುಖ್ಯಾತಿಯನ್ನು ಪಡೆಯುತ್ತಿದೆ. ಸಾಹಿತ್ಯದ ಮೂಲಕ ಪುನ: ಹಿಂದಿನ ಗತ ವೈಭವವನ್ನು ಪಡೆಯಬೇಕು ಎಂದು ರಾಜ್ಯ ವಿಧಾನ ಪರಿಷತ್ ನ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದರು.
ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಸಭಾಗ್ರಹದಲ್ಲಿ ಲೇಖಕ ಡಾ. ಹರಿಶ್ಚಂದ್ರ ಸಾಲ್ಯಾನ್ ರವರ "ದೈವದ ಮದಿಪು"ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶಾಸಕ ಲಾಲಾಜಿ ಮೆಂಡನ್ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು,ಮಾಜಿ ಸಚಿವ ಕೆ ಅಭಯಚಂದ್ರ ಜ್ಯೆನ್,ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ,ಮುಲ್ಕಿ ನ. ಪಂ. ಅಧ್ಯಕ್ಷ ಸುಭಾಷ್ ಶೆಟ್ಟಿ,ಭಾಗವತ,ಯಕ್ಷಗಾನ ವಿದ್ವಾಂಸ ಸುರೇಂದ್ರ ಪಣಿಯೂರು.ಧಾರ್ಮಿಕ ಪರಿಷತ್ ಸದಸ್ಯ ಕೆ ಭುವನಾಭಿರಾಮ ಉಡುಪ , ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ಸರೋಜಿನಿ ಸುವರ್ಣ, ವಿಜಯ ಕುಮಾರ್ ಕುಬೆವೂರು,ರವಿಚಂದ್ರ ,ವೈ ಎನ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
20/08/2022 09:15 pm