ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: 'ಗಾಂಧಿ ಕೊಂದವರು, ಬ್ರಿಟಿಷರಿಗೆ ಕ್ಷಮೆ ಕೇಳಿದವರು ರಾಷ್ಟ್ರಧ್ವಜ ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ'

ಪುತ್ತೂರು: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಮಹಾತ್ಮ ಗಾಂಧೀಜಿ ಅವರನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಪುತ್ತೂರು ಬ್ಲಾಕ್ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್‌ನಿಂದ ನಡೆದ ಸ್ವಾತಂತ್ರ್ಯದ ಅಮೃತ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ. ಅವರು ಸ್ವಾತಂತ್ರ್ಯದ ಇತಿಹಾಸವನ್ನು ತಿರುಚುವ ಪ್ರಯತ್ನದಲ್ಲಿ ಮಾಡುತ್ತಿದ್ದಾರೆ. ಈವರನ್ನು ಪ್ರಶ್ನೆ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆಯುವ ಮೂಲಕ ಅವಮಾನ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಕಿಡಿ ಕಾರಿದರು.

ಮಡಿಕೇರಿಯ ಜನರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ಜನವರಿ 26ರಂದು ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಗೆ ತೆರಳಿ ಹೋರಾಟ ನಡೆಸುವ ಮೂಲಕ ಅಲ್ಲಿನ ಜನರಿಗೆ ಸ್ವಾತಂತ್ರ್ಯ ನೀಡಬೇಕು ಎಂದರು.

Edited By : PublicNext Desk
Kshetra Samachara

Kshetra Samachara

22/08/2022 12:16 pm

Cinque Terre

3.06 K

Cinque Terre

1

ಸಂಬಂಧಿತ ಸುದ್ದಿ