ವಿಟ್ಲ: ಪುತ್ತೂರು ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ಪುತ್ತೂರು - ದರ್ಬೆಯಿಂದ ವಿಟ್ಲದ ತನಕ ನಡೆದ ಸ್ವಾತಂತ್ರ್ಯೋತ್ಸವ ನಡಿಗೆಯ ಸಮಾರೋಪ ಸಮಾರಂಭ ವಿಟ್ಲದಲ್ಲಿ ನಡೆಯಿತು.
ಕೆಪಿಸಿಸಿ ವಕ್ತಾರ ನಿಕೇತ್‌ರಾಜ್ ಮೌರ್ಯ ಅವರು ಸಮಾರೋಪ ಭಾಷಣ ಮಾಡಿ, ಮಾತನಾಡಿ ದೇಶವನ್ನು ಭಾಷೆ, ಜಾತಿ ಹೆಸರಿನಲ್ಲಿ ಒಡೆಯುವ ಕೆಲಸವಾಗುತ್ತಿದೆ. ದೇಶದಲ್ಲಿ ಜನರಿಗೆ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವ ಕೆಲಸವಾಗಬೇಕು. ಮನಸ್ಸು ಶುದ್ದವಾಗಿರಬೇಕಾದರೆ ಕರ್ಮ ಮಾಡಬೇಕು ಎಂದು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಮಾತನಾಡಿದರು.
ಪುತ್ತೂರಿನಿಂದ ಹೊರಟ ಪಾದಯಾತ್ರೆ ಕಬಕ, ಅಳಕೆಮಜಲು ಮೂಲಕ ಸಂಜೆ ವೇಳೆಗೆ ವಿಟ್ಲ ಆಗಮಿಸಿದೆ. ವಿಟ್ಲದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ಸಾಗಿದೆ.
Kshetra Samachara
22/08/2022 10:39 pm