ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಮಾಲಿನ್ಯಕಾರಕ ಘಟಕ ಸ್ಥಾಪನೆಗೆ ಗ್ರಾಮಸ್ಥರ ತೀವ್ರ ವಿರೋಧ

ಕಾರ್ಕಳ: ಮಿಯ್ಯಾರು ಗ್ರಾಮದ ಜನವಸತಿ ಪ್ರದೇಶದಲ್ಲಿ ಪರಿಸರ ಮಾಲಿನ್ಯಕಾರಕ ಘಟಕ ಸ್ಥಾಪನೆ ವಿರೋಧಿಸಿ, ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮಿಯ್ಯಾರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮ ಸಭೆಯು ಮಿಯ್ಯಾರಿನ ಮಹಾಲಿಂಗೇಶ್ವರ ದೇವರ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಗಿರೀಶ್ ಅಮಿನ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶಬೀರ್ ಶೇಕ್ ಪ್ರಶಾಂತ್ ಪೂಜಾರಿ ಮುಂತಾದವರು ಮಿಯ್ಯಾರಿನ ನೆಲ್ಲಿಗುಡ್ಡೆ ಪರಿಸರದಲ್ಲಿ ಸ್ಥಾಪಿಸಲು ಉದ್ದೇಶಿಸಲಾದ ಗೇರುಸಿಪ್ಪೆ ಸಂಸ್ಕರಣ ಘಟಕವನ್ನು ಸ್ಥಾಪನೆಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಸಭೆಯಲ್ಲಿ ಬಿಗಿಪಟ್ಟು ಹಿಡಿದರು. ನೆಲ್ಲಿಗುಡ್ಡೆ ಪರಿಸರದಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳಿದ್ದು, ಅಲ್ಲದೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಇರುವ ಹಿನ್ನೆಲೆ ಈ ಘಟಕದಿಂದ ಹೊರಸೂಸುವ ಅಪಾಯಕಾರಿ ರಾಸಾಯನಿಕ ಜನರ ಜೀವಕ್ಕೆ ಅಪಾಯಕಾರಿ ಆದ್ದರಿಂದ ಘಟಕಕ್ಕೆ ಅನುಮತಿ ನೀಡಬಾರದೆಂದು ಒತ್ತಾಯಿಸಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಈ ಬಗ್ಗೆ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಾಗಲಿಲ್ಲ .ಆದ್ದರಿಂದ ಸಭೆಯನ್ನು ಮುಂದೂಡಬೇಕೆಂದು ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು.

ಅಧಿಕಾರಿಗಳು ನಿಯಮ ಬಾಹಿರವಾಗಿ ಷರತ್ತುಬದ್ದ ಅನುಮತಿ ನೀಡಿ ಘಟಕಕ್ಕೆ ಪರೋಕ್ಷ ಬೆಂಬಲ ನೀಡಿರುವುದರಿಂದ ,ಅಧಿಕಾರಿಗಳು ಸಭೆಯಲ್ಲಿ ಸ್ಪಷ್ಟನೆ ನೀಡಲಿ ಎಂದು ಬಿಗಿಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕೊನೆಗೂ ಗ್ರಾಮಸ್ಥರು ಪ್ರತಿಭಟನೆಗೆ ಮಣಿದ ಅಧ್ಯಕ್ಷರು ಗ್ರಾಮ ಸಭೆಯನ್ನು ಮುಂದೂಡಿದರು. ಈ ಘಟಕದ ವಿರುದ್ಧ ಗ್ರಾಮಸ್ಥರು‌ ಪ್ರತಿಭಟನೆಗೆ ಮುಂದಾಗಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

24/08/2022 09:29 pm

Cinque Terre

6.05 K

Cinque Terre

1

ಸಂಬಂಧಿತ ಸುದ್ದಿ