ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸರಿ ಸುಮಾರು 10 ಲಕ್ಷ ಫಲಾನುಭವಿಗಳಿದ್ದಾರೆ. ಪ್ರಧಾನಿಯವರ ಮಂಗಳೂರು ಭೇಟಿಯ ದಿನ ಆ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹಾಜರಿರುವಂತೆ ವೈಯುಕ್ತಿಕ ಆಮಂತ್ರಣ ಪತ್ರಿಕೆ ನೀಡಲಿದ್ದೇವೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುತ್ತದೆ. ಆ ಬಳಿಕ ಯಾವ ತಾಲೂಕುಗಳಿಂದ ಎಷ್ಟು ಫಲಾನುಭವಿಗಳು ಬರಬೇಕೆಂದು ಆ ಬಳಿಕ ನಿಶ್ಚಯಿಸಲಾಗುತ್ತದೆ. ಲಕ್ಷಕ್ಕೂ ಕಡಿಮೆಯಿಲ್ಲದಂತೆ ದೊಡ್ಡ ಮಟ್ಟದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಹೇಳಿದರು.
ಮಂಗಳೂರಿನಲ್ಲಿ ಸಕಲ ಸಿದ್ಧತೆಯನ್ನು ಈಗಾಗಲೇ ಮಾಡಲಾಗಿದೆ. ಸರಕಾರಿ ಕಾರ್ಯಕ್ರಮದಯ ಭಾಗವಹಿಸಲು ಇದೇ ಮೊದಲ ಬಾರಿಗೆ ಪ್ರಧಾನಿಯವರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಸಂಸದರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.
PublicNext
25/08/2022 06:37 pm