ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಜತ ಮಹೋತ್ಸವದಲ್ಲಿ ಕಾಂಗ್ರೆಸ್ ಮುಖಂಡರ ಕಡೆಗಣನೆ: ಕೈ ಆಕ್ರೋಶ.!

ಉಡುಪಿ: ಉಡುಪಿ ಜಿಲ್ಲೆಯ ರಜತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ.ಇದು ಶ್ಲಾಘನೀಯ. ಆದರೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ನ ಮಾಜಿ ಸಚಿವರು ಮತ್ತು ಜನಪ್ರತಿನಿಧಿಗಳನ್ನು ಕಡೆಗಣಿಸಲಾಗಿದ್ದು ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಜಿಲ್ಲೆ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳ ಪಾಲೂ ಇದೆ. ಮಾಜಿ ಸಚಿವ ಸೊರಕೆಯವರು ನೂರಾರು ಕೋಟಿ ಅನುದಾನವನ್ನು ಜಿಲ್ಲೆಗೆ ತಂದಿದ್ದಾರೆ.ಆದರೆ ಕಾರ್ಯಕ್ರಮದಲ್ಲಿ ಅವರನ್ನು ಕಡೆಗಣಿಸಲಾಗಿದೆ.ಜಿಲ್ಲೆಯೊಂದರ ಅಭಿವೃದ್ಧಿಯಲ್ಲಿ ಎಲ್ಲ ಪಕ್ಷದವರ ಕೊಡುಗೆ ಇರುತ್ತದೆ. ಆದರೆ ಬಿಜೆಪಿಯವರು ಇಲ್ಲೂ ರಾಜಕೀಯ ಮಾಡಿದ್ದಾರೆ ಎಂದು ಅಶೋಕ್ ಕೊಡವೂರು ಅಸಮಾಧಾನ ಹೊರ ಹಾಕಿದ್ದಾರೆ.

Edited By :
PublicNext

PublicNext

27/08/2022 01:50 pm

Cinque Terre

42.16 K

Cinque Terre

0

ಸಂಬಂಧಿತ ಸುದ್ದಿ