ಮಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದು, ಅಂದು ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿರುವ ಸರಕಾರಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ವಿಶಾಲವಾದ ಜರ್ಮನ್ ಪೆಂಡಾಲ್ ಅಳವಡಿಕೆ ಆಗಲಿದ್ದು, ವೇದಿಕೆ ಸೇರಿದಂತೆ ಇಡೀ ಸಭಾಂಗಣ ಸಂಪೂರ್ಣ ನೆಲದಿಂದ ಎತ್ತರಕ್ಕೆ ಇರಲಿದೆ.
ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ 30 ಎಕರೆ ಜಾಗದಲ್ಲಿ ಸಮಾವೇಶ ನಡೆಯಲಿದೆ. ರಾತ್ರಿ - ಹಗಲು ಮೈದಾನದಲ್ಲಿನ ಗಿಡಗಂಟಿಗಳನ್ನು ತೆಗೆದು ಜೆಸಿಬಿ ಮೂಲಕ ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದೆ. ಸಮಾವೇಶಕ್ಕೆ ಬರುವ ಕಾರ್ಯಕರ್ತರು, ಸಾರ್ವಜನಿಕರಿಗೆ ಸುಲಭವಾಗಲು ಡಿವೈಡರ್ ಗೆ ಕತ್ತರಿ ಹಾಕಲಾಗಿದೆ. ಅಲ್ಲದೆ ಪ್ರತ್ಯೇಕ ಹೆಚ್ಚುವರಿ ರಸ್ತೆಯನ್ನು ನಿರ್ಮಾಣ ಮಾಡುವ ಕಾರ್ಯವೂ ನಡೆಯುತ್ತಿದೆ.
ಕರಾವಳಿಯಲ್ಲಿ ವಾರದಿಂದ ನಿರಂತರ ಮಳೆಯಾಗುತ್ತಿದೆ. ಸೆ.2ರಂದು ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಆದ್ದರಿಂದ ಮಳೆಗೆ ಯಾವುದೇ ತೊಂದರೆಯಾಗದಂತೆ ಸಮಾವೇಶ ನಡೆಯುವ ಸ್ಥಳವನ್ನು ಪೂರ್ತಿ ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿದೆ. ಸಮಾವೇಶದ ವೇದಿಕೆಯನ್ನು ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್ ಫಾರಂ ರಚಿಸಲಾಗುತ್ತಿದೆ. ಮಳೆ ನೀರು ನಿಂತು ಕೆಸರಿನ ತಾಪತ್ರಯ ಆಗದಂತೆ ಜರ್ಮನ್ ಮಾದರಿಯ ಪೆಂಡಾಲ್ ಹಾಕಲಾಗುತ್ತದೆ. ಎನ್ಎಂಪಿಟಿ ಈ ಸಮಾವೇಶದ ಸ್ಥಳ ಸಿದ್ಧತೆಯ ಹೊಣೆಯನ್ನು ಹೊತ್ತಿದೆ.
PublicNext
27/08/2022 08:00 pm