ಕುಂದಾಪುರ: ಬೈಂದೂರು ತಹಶಿಲ್ದಾರ್ ಕಚೇರಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿರುವುದಾಗಿ ಬಿಜೆಪಿ ಮಂಡಲ ಅಧ್ಯಕ್ಷರು ಆರೋಪಿಸಿದ್ದರೂ ಶಾಸಕರು ಏಕೆ ಮೌನವಾಗಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಅಧಿಕಾರಿಗಳು ಶಾಸಕರ ಹಿಡಿತದಲ್ಲಿ ಇಲ್ಲ. ತಮ್ಮದೇ ಸರಕಾರ, ತಮ್ಮದೇ ಶಾಸಕರಿದ್ದರೂ ಕೂಡ ಮಂಡಲದ ಅಧ್ಯಕ್ಷರು ತಮ್ಮ ಸರಕಾರದ ವಿರುದ್ಧವೇ ಆರೋಪ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಶಾಸಕರ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಮಂಡಲ ಅಧ್ಯಕ್ಷರು ಆರೋಪಿಸಿದಂತೆ ತಹಶೀಲ್ದಾರ್ ಕಚೇರಿಯಲ್ಲಿ ಅಕ್ರಮ ನಡೆಯುತ್ತಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಜಿಲ್ಲಾಧಿಕಾರಿಗಳ ಮೂಲಕ ಸಮಗ್ರ ತನಿಖೆ ನಡೆಸಿ ತಪ್ಪು ಮಾಡಿದವರನ್ನು ಮನೆಗೆ ಕಳಿಸುವ ಕೆಲಸವಾಗಬೇಕು. ಮುಂದೆ ಈ ವ್ಯವಸ್ಥೆ ಪುನರಾವರ್ತನೆಯಾದರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಕಚೇರಿಯೆದುರು ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Kshetra Samachara
27/08/2022 08:51 pm