ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕಾಂಗ್ರೆಸ್ ನವರಿಗೆ ಮಾಡೋಕೆ ಬೇರೆ ಕೆಲ್ಸ ಇಲ್ಲ; ಸಚಿವ ಸೋಮಣ್ಣ ಸಿಡಿಮಿಡಿ

ಮುಲ್ಕಿ: ರಾಜ್ಯ ಸರಕಾರದ ವಿರುದ್ಧ ಶೇ. 40ರ ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಹಾಗೂ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ವಸತಿ ಸಚಿವ ಸೋಮಣ್ಣ ಕಿಡಿಕಾರಿದ್ದಾರೆ.

ಅವರು ಮುಲ್ಕಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಕಾಂಗ್ರೆಸ್ ನವರಿಗೆ ಮಾಡೋಕೆ ಬೇರೆ ಕೆಲ್ಸ ಇಲ್ಲ. ಕಳೆದ 60 ವರ್ಷಗಳಿಂದ ಕಾಂಗ್ರೆಸ್‌ ನವರು ಆಡಳಿತ ಮಾಡಿ ಏನು ಸಾಧಿಸಿದ್ದಾರೆ? ಕೆಂಪಣ್ಣ ಕಾಂಗ್ರೆಸ್ ಪಕ್ಷದೊಡನೆ ಸೇರಿ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

ಅವ್ಯವಹಾರ ನಡೆದಿದ್ದರೆ ಸಾಕ್ಷಿ ಸಮೇತ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದು ಸ್ವತಃ ಮುಖ್ಯಮಂತ್ರಿಯವರೇ ತಿಳಿಸಿದ್ದು, ಅನಗತ್ಯ ಆರೋಪ ಅವರಿಗೇ ಉರುಳಾಗಬಹುದು ಎಂದು ಎಚ್ಚರಿಸಿದ ಸಚಿವರು, ರಾಜ್ಯದ ಜನರು ಅವರೆಲ್ಲರ ಆರೋಪಗಳನ್ನು ನಂಬಲು ದಡ್ಡರಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.

ಮುಂದಿನ ವರ್ಷದವರೆಗೂ ಬಸವರಾಜ್ ಬೊಮ್ಮಾಯಿ ಅವರೇ ನಮ್ಮ ರಾಜ್ಯದ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ, ಮಾಜಿ ಸದಸ್ಯ ವಿಠಲ ಎನ್. ಎಂ. ಮತ್ತಿತರರು ಉಪಸ್ಥಿತರಿದ್ದರು.

Edited By : Shivu K
PublicNext

PublicNext

27/08/2022 09:49 pm

Cinque Terre

57.96 K

Cinque Terre

1