ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾವರ್ಕರ್ ಪುತ್ಥಳಿ ಬೇಡ ಸರ್ಕಲ್ ಮಾಡ್ತೇವೆ ಶಾಸಕ ರಘುಪತಿ ಭಟ್

ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿ ಸಾವರ್ಕರ್ ಅವರ ಸರ್ಕಲ್ ನಿರ್ಮಾಣ ಮಾಡುವ ಬಗ್ಗೆ ಇಂದು ನಡೆದ ನಗರಸಭೆ ಅಧಿವೇಶನದಲ್ಲಿ ನಿರ್ಣಯ ಮಾಡಿದ್ದೇವೆ. ಆದರೆ ಅವರ ಪುತ್ಥಳಿ ಬೇಡ ಎಂದು ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಶಾಸಕರು, ಸಾವರ್ಕರ್ ಬಗ್ಗೆ ಅತ್ಯಂತ ಗೌರವ ಇದೆ. ಅವರಿದ್ದ ಅಂಡಮಾನ್ ಜೈಲಿಗೂ ಹೋಗಿ ಬಂದಿದ್ದೇವೆ. ಅವರ ಪುತ್ಥಳಿ ನಿರ್ಮಾಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಅದರೆ ಪುತ್ಥಳಿ ನಿರ್ಮಾಣ ಮಾಡಿದರೆ ಅದಕ್ಕೆ ಕಿಡಿಗೇಡಿಗಳು ಅವಮಾನ‌ ಮಾಡುವ ಸಾಧ್ಯತೆಗಳಿವೆ. ಹಾಗಾಗಿ ನಗರದ ಪ್ರಮುಖ ರಸ್ತೆಯಲ್ಲೇ ಸರ್ಕಲ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು. ಪುತ್ಥಳಿ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇವೆ. ಈ ಸಂಬಂಧ ಹಿಂದೂ ಸಂಘಟನೆಗಳ ಮುಖಂಡರಿಗೆ ಮನವಿ ಮಾಡಿಕೊಡುತ್ತೇವೆ. ಶೀಘ್ರದಲ್ಲೇ ವೃತ್ತ ನಿರ್ಮಾಣ ಮಾಡಿ ಸಾವರ್ಕರ್ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದ್ದಾರೆ.

Edited By : Manjunath H D
PublicNext

PublicNext

30/08/2022 05:17 pm

Cinque Terre

34.9 K

Cinque Terre

4

ಸಂಬಂಧಿತ ಸುದ್ದಿ