ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಿಲ್ಕಿಸ್ ಬಾನು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಕಾಂಗ್ರೆಸ್

ಉಡುಪಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಿಡುಗಡೆಗೊಳಿಸಿದನ್ನು ಖಂಡಿಸಿ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್‌ ರಾಜ್ ಸಂಘಟನೆ ಹಾಗೂ ಹತ್ತು ಬ್ಲಾಕ್‌ಗಳ ವತಿಯಿಂದ ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕದ ಮುಂಭಾಗ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ವೆರೋನಿಕಾ ಕರ್ನೇಲಿಯೋ ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲಾದ ಎಲ್ಲ 11 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುವಾಗಲೇ ಗುಜರಾತ್‌ ನಲ್ಲಿ ನಡೆದ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆಗೊಳಿಸಿ, ತನ್ನ ದ್ವಂದ್ವ ನಿಲುವು ತೋರಿಸಿದ್ದಾರೆ. ಈ ಮೂಲಕ ಬಿಜೆಪಿಯ ನೈಜ ಬಣ್ಣ ಬಯಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ನಾಗೇಶ್ ಕುಮಾರ್ ಉದ್ಯಾವರ ಮಾತನಾಡಿ, ಸಭ್ಯ, ಸುಸಂಸ್ಕೃತ ಸಮಾಜದಲ್ಲಿ ನಾವು ಇದ್ದೇವಾ ಎನ್ನುವುದನ್ನು ಪ್ರಶ್ನಿಸುವ ಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ಸಜ್ಜನರನ್ನು ದಾರಿ ತಪ್ಪಿಸುವ ನಾಟಕವನ್ನು ಕರಗತ ಮಾಡಿಕೊಂಡಿದ್ದಾರೆ. ಉಡುಪಿ ರಸ್ತೆಯ ಬಗ್ಗೆ ಧ್ವನಿ ಎತ್ತಿದ್ದ ಮಹಿಳೆಯೊಬ್ಬರ ವೈಯಕ್ತಿಕ ತೇಜೋವಧೆ, ಟೀಕೆ ಮಾಡುತ್ತಿರುವ ಬಿಜೆಪಿಗರ ನಿಲುವು ಏನು ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದರು. ಪ್ರತಿಭಟನೆಯಲ್ಲಿ ಕೈ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

31/08/2022 03:12 pm

Cinque Terre

7.21 K

Cinque Terre

1

ಸಂಬಂಧಿತ ಸುದ್ದಿ