ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ ಮಂಗಳೂರು ಭೇಟಿ ಹಿನ್ನೆಲೆ; ಬೃಹತ್ ಸಮಾವೇಶಕ್ಕೆ ಭರದ ಸಿದ್ಧತೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಯ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.

25 ಎಕರೆ ಪ್ರದೇಶದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ಬೃಹತ್ ಪೆಂಡಾಲ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಸಾವಿರಾರು ಮಂದಿ ಕಾರ್ಮಿಕರು ಕೆಲಸ ಕಾರ್ಯದಲ್ಲಿ ತೊಡಗಿದ್ದಾರೆ. ಮೈದಾನದ ಸುತ್ತಲೂ ತಡೆ ಬೇಲಿಯ ಅಳವಡಿಕೆ ಮಾಡಲಾಗಿದೆ. ಸ್ಟೀಲ್ ಶೀಟ್ ಗಳ ಮೇಲೆ ಬಿಳಿ ಬಟ್ಟೆ ಹಾಕಿ ತಡೆಬೇಲಿ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಪೆಂಡಾಲ್ ಒಳಗಡೆ 80ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ದೂರದಿಂದ ಬರುವವರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ಒಂದು ಲಕ್ಷ ಮಂದಿಗೆ ಜಿಲ್ಲಾಡಳಿತ ಉಪಹಾರ ವ್ಯವಸ್ಥೆ ಮಾಡುತ್ತಿದೆ. ಫಲಾನುಭವಿಗಳಿಗೆ ಬಸ್ ವ್ಯವಸ್ಥೆ ಮಾಡಿ ಕರೆತರಲಾಗುತ್ತದೆ. ಮೈದಾನದ ಸುತ್ತಲೂ 15 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಸ್ಥಳಕ್ಕೆ ಎಸ್ ಪಿ ಜಿ ಅಧಿಕಾರಿಗಳು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

31/08/2022 06:48 pm

Cinque Terre

10.28 K

Cinque Terre

16

ಸಂಬಂಧಿತ ಸುದ್ದಿ