ಮಂಗಳೂರು: ಪ್ರಧಾನಿ ಮೋದಿಯವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಒಂದು ಲಕ್ಷಕ್ಕೂ ಅಧಿಕ ಜನರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ವೇಳೆ ಅವರು 3,700 ಕೋಟಿ ರೂ. ಯೋಜನೆಗೆ ಚಾಲನೆ ನೀಡಲಿದ್ದಾರೆ. ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಎರಡೂ ಜಿಲ್ಲೆಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ಕರೆತರಲು 2 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಸಮ್ಮಾನ್, ವಿದ್ಯಾನಿಧಿ ಸೇರಿ ಹಲವು ಫಲಾನುಭವಿಗಳು ಆಗಮಿಸಲಿದ್ದಾರೆ. ಎಲ್ಲರೂ ಮಧ್ಯಾಹ್ನ 12 ಗಂಟೆ ಒಳಗೆ ಮೈದಾನದ ಒಳಗೆ ಇರಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
PublicNext
01/09/2022 05:41 pm