ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ಬಂಧನ ವಿಳಂಬ ಆರೋಪಗಳಿಗೆ ಉತ್ತರ ಕೊಡುವ ಅವಶ್ಯಕತೆಯಿಲ್ಲ. ಕಾನೂನು ಪ್ರಕಾರವೇ ಎಲ್ಲ ಪ್ರಕ್ರಿಯೆ ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಈ ಸಂದರ್ಭ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಪಿಎಂ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಆಗಮಿಸಿರುವ ಸಿಎಂ ಮಂಗಳೂರು ಏರ್ ರ್ಪೋಟ್ ನಲ್ಲಿ ಮಾತನಾಡಿದರು. ಪೊಲೀಸರಿಗೆ ಈ ವಿಚಾರದಲ್ಲಿ ಮುಕ್ತವಾಗಿ ಸರಕಾರ ಸ್ವಾತಂತ್ರ್ಯ ನೀಡಿದ್ದು, ಅವರ ಕೆಲಸ ಮಾಡುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿಯವರು ಮಂಗಳೂರಿಗೆ ಇಂದು ಭೇಟಿ ನೀಡಲಿದ್ದು, 3,800 ಕೋಟಿ ರೂ.ಗಳ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಕರಾವಳಿಯ ಅಭಿವೃದ್ಧಿಗೆ ಪೂರಕವಾದ ಆರ್ಥಿಕ ಹಾಗೂ ಬಂದರು ಸಾಮರ್ಥ್ಯ ಹೆಚ್ಚು ಮಾಡುವ ಯೋಜನೆಗಳಾಗಿವೆ. ಅಲ್ಲದೆ ವ್ಯವಹಾರ, ಉದ್ಯೋಗವನ್ನು ಹೆಚ್ಚಳಗೊಳಿಸುವ ಯೋಜನೆಗಳಾಗಿವೆ.
ಜೊತೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳಸಮುದ್ರ ಮೀನುಗಾರಿಕೆಯ 100 ಬೋಟ್ ಗಳಿಗೆ ಮಂಜೂರಾತಿ ನೀಡಲಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿ ಫಲಾನುಭವಿಗಳಿಗಳಿಗೆ ಹಸ್ತಾಂತರಿಸಲಿದ್ದಾರೆ. ಈ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಪ್ರಧಾನಿ ಮೋದಿಯವರು ಅತಿ ದೊಡ್ಡ ಶಕ್ತಿ ನೀಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
PublicNext
02/09/2022 11:28 am