ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಧಾನಿ ಮೋದಿ ಇಂದು ಕಡಲ ನಗರಿ ಮಂಗಳೂರಿಗೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ ಬೃಹತ್ ಸಭೆಗೆ ಕ್ಷಣಗಣನೆ ಆರಂಭವಾಗಿದೆ.

ಮೋದಿಯವರು ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೊಚ್ಚಿನ್ ನಿಂದ ವಿಶೇಷ ವಿಮಾನದ ಮೂಲಕ ಆಗಮಿಸುವ ಅವರು ಮಧ್ಯಾಹ್ನ12.55ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರದ ಸಚಿವರುಗಳು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರುಗಳು ಇತರ ಜನಪ್ರತಿನಿಧಿಗಳು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ.

ಮಧ್ಯಾಹ್ನ 1.20ಕ್ಕೆ ಮಂಗಳೂರು ಏರ್ಪೋಟ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸುವ ಮೋದಿಯವರು ಪಣಂಬೂರಿನ ಎನ್ಎಂಪಿಎ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ಎನ್ಎಂಪಿಎ ಹೆಲಿಪ್ಯಾಡ್ ನಿಂದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ವಾಹನದ ಮೂಲಕ ಆಗಮಿಸಲಿದ್ದಾರೆ. ಅಲ್ಲಿ ಎನ್ಎಂಪಿಎ, ಎಂಆರ್ ಪಿಎಲ್ ನ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಕಾಮಗಾರಿಯ ಲೋಕಾರ್ಪಣೆ ನೆರವೇರಿಸಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಜನರನ್ನು, ಫಲಾನುಭವಿಗಳನ್ನು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾರ್ಯಕ್ರಮ ಮಧ್ಯಾಹ್ನ 2.55ರವರೆಗೆ ನಡೆಯಲಿದ್ದು ಬಳಿಕ ಅವರು ರಸ್ತೆ ಮಾರ್ಗದ ಮೂಲಕ ಎನ್ಎಂಪಿಎಗೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ಪಕ್ಷದ ಪ್ರಮುಖರೊಂದಿಗೆ ಆಂತರಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. 4 ಗಂಟೆ ವೇಳೆಗೆ ಎನ್ಎಂಪಿಎ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿದಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿಯವರು ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

Edited By : Vijay Kumar
Kshetra Samachara

Kshetra Samachara

02/09/2022 11:43 am

Cinque Terre

2.81 K

Cinque Terre

0

ಸಂಬಂಧಿತ ಸುದ್ದಿ