ಕಾಪು: ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಕರಾವಳಿ ಸಜ್ಜಾಗಿದ್ದು, ಕೋಮು ದ್ವೇಷದ ಘಟನೆಗಳಿಂದ ನಲುಗಿರುವ ದಕ್ಷಿಣ ಕನ್ನಡ ಸಹಿತ ಕರಾವಳಿ ಜಿಲ್ಲೆಗೆ ಮೋದಿಯವರ ಭೇಟಿ ನವಚೈತನ್ಯ ತುಂಬಲಿದ್ದು ಜನರ ಗೊಂದಲಗಳಿಗೆ ತೆರೆ ಬೀಳುವ ನಿರೀಕ್ಷೆಯಿದೆ ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದರು.
ಕಾಪುವಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಶಾಸಕರು, ಪ್ರಧಾನಿ ಮೋದಿ ಅವರು ಮಂಗಳೂರಿನ ಎನ್‌ಎಂಪಿಟಿ ಮತ್ತು ಎಂಆರ್‌ಪಿಎಲ್‌ಗೆ ಭೇಟಿ ನೀಡಲಿದ್ದು, ಈ ವೇಳೆ ಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಸರಕಾರಿ ಯೋಜನೆಗಳ ಫಲಾನುಭವಿಗಳು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದಲೂ ಸಹಸ್ರಾರು ಮಂದಿ ಫಲಾನುಭವಿಗಳು ಭಾಗವಹಿಸಲಿದ್ದು, ಕಾಪು ಕ್ಷೇತ್ರದಿಂದ ಐದು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.
Kshetra Samachara
02/09/2022 12:45 pm