ಮಂಗಳೂರು: ರಾಜ್ಯ ರಾಜಕಾರಣದ ಯಾವುದೇ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಕೇಂದ್ರ ಹಾಗೂ ರಾಜ್ಯದ ಯೋಜನೆಗಳನ್ನು ಮನೆಮನೆಗೆ ತಲುಪಿಸುವಂತೆ ಮೋದಿ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.
ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ಬಳಿಕ ಎನ್ಎಂಪಿಎಯಲ್ಲಿ ನಡೆದಿರುವ ಕೋರ್ ಕಮಿಟಿ ಸಭೆ ಬಗ್ಗೆ ನಳಿನ್ ಕುಮಾರ್ ಕಟೀಲು ಅವರು ಪ್ರತಿಕ್ರಿಯೆ ನೀಡಿ, ಪ್ರಧಾನಿ ಮೋದಿಯವರು ಕೋರ್ ಕಮಿಟಿ ಸದಸ್ಯರ ಜೊತೆ ಪರಿಚಯಾತ್ಮಕವಾಗಿ ಮಾತನಾಡಿದ್ದಾರೆ. ಎಲ್ಲರನ್ನೂ ಪರಿಚಯ ಮಾಡಿ ಕೆಲ ಹೊತ್ತು ಮಾತನಾಡಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಲು ಹೇಳಿದ್ದಾರೆ. ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಯ ಸವಲತ್ತು ದೊರಕಬೇಕು ಮತ್ತು ಜಾಗೃತಿಯಾಗಬೇಕು ಎಂದು ತಿಳಿಸಿದರು.
ಸರ್ಕಾರದ ಅಂಕಿಅಂಶ ಆಗಿರದೇ ನಿಜವಾದ ಫಲಾನುಭವಿಗಳಿಗೆ ತಲುಪಲು ಯತ್ನಿಸಿ ಅಂದಿದ್ದಾರೆ. ಚುನಾವಣಾ ತಯಾರಿ ಈಗಾಗಲೇ ಮಾಡಿದ್ದೇವೆ. 8ರಂದು ಜನೋತ್ಸವ ಇದೆ. ಅಲ್ಲದೇ ರಾಜ್ಯದ ಏಳು ಕಡೆ ದೊಡ್ಡ ಸಮಾವೇಶ ಮಾಡುತ್ತಿದ್ದೇವೆ ಎಂದು ನಳಿನ್ ಕುಮಾರ್ ಕಟೀಲು ತಿಳಿಸಿದರು.
PublicNext
02/09/2022 08:39 pm