ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಸಚಿವ ಸುನಿಲ್ ಕುಮಾರ್

ಮಂಗಳೂರು: ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ವಿದ್ಯಾರಂಗಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.

ದ.ಕ.ಜಿಲ್ಲಾಡಳಿತ, ಜಿಪಂ, ಶಿಕ್ಷಕರ ಕಲ್ಯಾಣ ನಿಧಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,‌ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ, ವಿದ್ಯಾರಂಗಕ್ಕೆ ಕಾಲ ಕಾಲಕ್ಕೆ ಅಗತ್ಯವಿರುವ ಈಡೇರಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿನ ಶಿಕ್ಷಕರ ಕೈಯನ್ನು ಬಲಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಶಿಕ್ಷಕರು ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ನವ ಭಾರತ ನಿರ್ಮಾಣದ ಕನಸನ್ನು ಮೂಡಿಸಬೇಕು. ಶಿಕ್ಷಕರ ದಿನಾಚರಣೆ ಸಂದರ್ಭ ಈ ಬಗ್ಗೆ ಮನನ ಮಾಡಿಕೊಳ್ಳುವ ಅಗತ್ಯವಿದೆ. ನವ ಭಾರತದ ಕನಸನ್ನು ಹೊಂದಿರುವ ಪ್ರಧಾನಮಂತ್ರಿಗಳು ಜಗತ್ತಿಗೆ ಮಾದರಿಯಾಗುವ ಚಿಂತನೆಗಳೊಂದಿಗೆ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಶಿಕ್ಷಕರು ತಮ್ಮ ಜವಾಬ್ದಾರಿಯಿಂದ ಶಾಲಾ ಆವರಣದಿಂದಲೇ ನವ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಂಕಲ್ಪ ಮಾಡಬೇಕು. ಶಿಕ್ಷಕರ ದಿನಾಚರಣೆಯು ನವ ಭಾರತ ನಿರ್ಮಾಣದ ಸಿದ್ಧತೆಯ ನಡೆಸುವ ಚಿಂತನ ದಿನವಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.

Edited By : Nirmala Aralikatti
Kshetra Samachara

Kshetra Samachara

05/09/2022 10:06 pm

Cinque Terre

3 K

Cinque Terre

0

ಸಂಬಂಧಿತ ಸುದ್ದಿ