ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ಮಾಜಿ ಸಚಿವ ಪ್ರಿಯಾಂಕ ಖರ್ಗೆ ಕಾರ್ಯಕರ್ತರ ಭೇಟಿ : ರಾಜಕೀಯ ವಿದ್ಯಮಾನಗಳ ಚರ್ಚೆ

ಮುಲ್ಕಿ : ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಮುಲ್ಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಕ್ಷೇತ್ರದ ರಾಜಕೀಯ ಹಾಗೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಮಾಧ್ಯಮದವರೊಡನೆ ಮಾತನಾಡಿದ ಮಾಜಿ ಸಚಿವರು ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಲು ನಿರಾಕರಿಸಿದರು. ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಿಯಾಂಕ ಖರ್ಗೆ ರವರನ್ನು ಗೌರವಿಸಲಾಯಿತು.

ಈ ಸಂದರ್ಭ ಮುಲ್ಕಿ ನಗರ ಪಂಚಾಯತ್ ಸದಸ್ಯ ಪುತ್ತು ಬಾವ, ಯೋಗೀಶ್ ಕೋಟ್ಯಾನ್, ಮಂಜುನಾಥ್ ಕಂಬಾರ, ಸಂದೀಪ್ ಕುಮಾರ್, ಬಾಲಚಂದ್ರ ಕಾಮತ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

06/09/2022 06:22 pm

Cinque Terre

10.15 K

Cinque Terre

0

ಸಂಬಂಧಿತ ಸುದ್ದಿ