ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ಕಾಂಗ್ರೆಸ್‌ನಿಂದ "ಭಾರತ್ ಜೋಡೋ" ಯಶಸ್ಸಿಗೆ ಸರ್ವಧರ್ಮ ಪ್ರಾರ್ಥನಾ ಸಭೆ

ಉಡುಪಿ: ದೇಶದಲ್ಲಿ ನಡೆಯುತ್ತಿರುವ ಜಾತಿ ಧರ್ಮಗಳ ಧ್ರುವೀಕರಣ ಸಂದರ್ಭದಲ್ಲಿ ಜನರ ಮನಸ್ಸನ್ನು ಬೆಸೆಯುವ ಸಲುವಾಗಿ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 150 ದಿನಗಳ ಭಾರತ ಐಕ್ಯತಾ ಯಾತ್ರೆಯನ್ನು ಹಮ್ಮಿಕೊಂಡಿದೆ.

(ಭಾರತ ಜೂಡೋ ಯಾತ್ರೆ) ಈ ಪಾದಯಾತ್ರೆಯು ಕರ್ನಾಟಕದಲ್ಲಿ 21 ದಿನಗಳು ಸಂಚರಿಸುವುದರಿಂದ ಪಾದಯಾತ್ರೆಯನ್ನು ಯಶಸ್ವಿಯಾಗಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಇಂದು ಬೆಳಿಗ್ಗೆ ಉಡುಪಿ ಭುಜಂಗ ಪಾರ್ಕ್ ಗಾಂಧಿ ಕಟ್ಟೆ ಎದುರು ಸರ್ವ ಧರ್ಮ ಪ್ರಾರ್ಥನಾ ಸಭೆಯನ್ನು ನಡೆಸಿತು ˌ ಈ ಪ್ರಾರ್ಥನೆಯಲ್ಲಿ ಸರ್ವ ಧರ್ಮಗಳ ಧರ್ಮ ಗುರುಗಳು ಭಾಗವಹಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮತ್ತು ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

07/09/2022 01:06 pm

Cinque Terre

2.58 K

Cinque Terre

1

ಸಂಬಂಧಿತ ಸುದ್ದಿ