ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬೃಹತ್ ಕೈಗಾರಿಕೆಗಳ ಅಕ್ರಮಗಳಿಗಿಲ್ಲ ಕ್ರಮ: ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಪ್ರತಿಭಟನೆ

ಮಂಗಳೂರು: ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಎಂಆರ್ ಪಿಎಲ್, ಪರಿಸರದ ಮೇಲೆ ಹಾನಿ ಮಾಡುತ್ತಿರುವ ಅದಾನಿಯ ವಿಲ್ಮಾ, ರುಚಿಗೋಲ್ಡ್, ಯು.ಬಿ.ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ವಿರುದ್ಧ ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯು ಪ್ರತಿಭಟನೆ ನಡೆಸಿತು. ಈ ವೇಳೆ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ಅಣಕು ಶವಯಾತ್ರೆ, ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಡಿಯಾಳು‌ ಆಗಿ ಅವುಗಳ ಅಕ್ರಮಗಳನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ಪರಿಣಾಮ ಜೋಕಟ್ಟೆ, ಬಜ್ಪೆ, ಬೈಕಂಪಾಡಿ, ಸುರತ್ಕಲ್ ಮುಂತಾದ ಪ್ರದೇಶಗಳು ಗಂಭೀರವಾದ ಕೈಗಾರಿಕಾ ಮಾಲಿನ್ಯಕ್ಕೆ ತುತ್ತಾಗಿದೆ. ಇದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದರು.

ಸರಕಾರದ ಆದೇಶವಿದ್ದರೂ ಹಸಿರು ವಲಯ ನಿರ್ಮಾಣಕ್ಕಾಗಿ ಎಂಆರ್ ಪಿಎಲ್ 27 ಎಕರೆ ಭೂಸ್ವಾಧೀನಕ್ಕೆ ಸಹಕರಿಸುತ್ತಿಲ್ಲ. ಶೇ. 33 ರಷ್ಟು ಜಮೀನಿನಲ್ಲಿ ಹಸಿರು ವಲಯ ನಿರ್ಮಾಣ ಮಾಡದಿರುವುದರಿಂದ ಕಂಪನಿಗೆ ಬೀಗ ಜಡಿಯಬಹುದಾದರೂ ಮಾಲಿನ್ಯ ನಿಯಂತ್ರಣ ಮಂಡಳಿ ಎಂಆರ್ ಪಿಎಲ್ ಗೆ ವಿಧೇಯವಾಗಿ ನಡೆದುಕೊಳ್ಳುತ್ತಿದೆ. ಬೈಕಂಪಾಡಿ ಕೈಗಾರಿಕಾ ವಲಯದ ಬೃಹತ್ ಕಂಪೆನಿಗಳ ಮಾಲಿನ್ಯದಿಂದ ಫಲ್ಗುಣಿ ನದಿ ವಿಷಮಯಗೊಳ್ಳುತ್ತಿದರೂ ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಣು ಮುಚ್ಚಿ ಕುಳಿತಿದೆ. ಇಂತಹ ಹೊಣೆಗೇಡಿತನದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.

Edited By : Nagesh Gaonkar
Kshetra Samachara

Kshetra Samachara

07/09/2022 04:13 pm

Cinque Terre

4.55 K

Cinque Terre

2

ಸಂಬಂಧಿತ ಸುದ್ದಿ