ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿದ ನಂತರ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿದ್ದು, ಮೂಲಭೂತ ಸೌಕರ್ಯಕ್ಕಾಗಿ ಮುಂದಿನ ದಿನದಲ್ಲಿ ಮತ್ತಷ್ಟು ಅನುದಾನವನ್ನು ಒದಗಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೊರಾರ್ಜಿದೇಸಾಯಿ ವಸತಿ ಶಾಲೆಯ ಸಮೀಪದ ಕೊಂಕಣಹಿತ್ಲು ಗಿಡಿಗೆರೆ ಕಾಂಕ್ರೀಟ್ ರಸ್ತೆಯ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಲ್ಕಿ ಮೂಡಬಿದ್ರೆ ಭಾಜಪದ ಅಧ್ಯಕ್ಷರಾದ ಸುನಿಲ್ ಆಳ್ವ, ಜಿಲ್ಲಾ ಭಾಜಪ ಉಪಾಧ್ಯಕ್ಷ ಈಶ್ವರ್ ಕಟೀಲ್, ಭಾಜಪ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಭಿಲಾಶ್ ಶೆಟ್ಟಿ ಕಟೀಲು, ಮೆನ್ನಬೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಜನಾರ್ಧನ ಕಿಲೆಂಜೂರು, ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಧ್ಯಾಪಕರಾದ ಪುಟ್ಟಸ್ವಾಮಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿನ ಮಾಜಿ ಉಪಾಧ್ಯಕ್ಷ ಮೋರ್ಗನ್ ವಿಲಿಯಂ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
10/09/2022 07:56 pm