ಶಿರ್ವ: ಶಿರ್ವ ಗ್ರಾಮ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ರತನ್ ಕುಮಾರ್ ಶೆಟ್ಟಿ ಕಲ್ಲೊಟ್ಟು ಆಯ್ಕೆಯಾಗಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಕೆ.ಆರ್. ಪಾಟ್ಕರ್ ರಾಜಿನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ಅಧ್ಯಕ್ಷ ಹುದ್ದೆಗೆ ಕಾಂಗ್ರೆಸ್ ಬೆಂಬಲಿತ ರತನ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ನಾಮಪತ್ರ ಸಲ್ಲಿಸಿದ್ದರು. ನೂತನ ಅಧ್ಯಕ್ಷರಾಗಿ ರತನ್‌ಕುಮಾರ್ ಶೆಟ್ಟಿ 20 14 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. 34 ಸದಸ್ಯ ಬಲದ ಶಿರ್ವ ಗ್ರಾಪಂನಲ್ಲಿ ಕಾಂಗ್ರೆಸ್ ಬೆಂಬಲಿತ 19 ಸದಸ್ಯರಿದ್ದು, ಬಿಜೆಪಿಯ ಒಂದು ಮತ ಕಾಂಗ್ರೆಸ್ ಪಾಲಾಗಿದೆ. ಚುನಾವಣಾಧಿಕಾರಿಯಾಗಿ ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.
Kshetra Samachara
15/09/2022 08:57 am