ಉಡುಪಿ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರ ಸರಕಾರವು 'ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣ'ಕ್ಕೆ ಬದ್ಧವಾಗಿದೆ. ಸರಕಾರದ ಅನೇಕ ಜನಪರ ಯೋಜನೆಗಳನ್ನು ಸ್ವೀಕರಿಸಿ ಫಲಾನುಭವಿಗಳಾಗುವ ಮೂಲಕ ದೇಶವಾಸಿಗಳು ಇದನ್ನು ಅನುಮೋದಿಸಿದ್ದಾರೆ.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ.25ರಂದು ಪಕ್ಷದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನ. ಅ.2ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆಯಂತೆ, ರಾಜ್ಯ ಬಿಜೆಪಿ ಮಾರ್ಗದರ್ಶನದಲ್ಲಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸೆ.17ರಿಂದ ಅ.2ರ ವರೆಗೆ ಜಿಲ್ಲೆಯಾದ್ಯಂತ ವೈಶಿಷ್ಟ್ಯಪೂರ್ಣ ಸೇವಾ ಚಟುವಟಿಕೆಗಳೊಂದಿಗೆ 'ಸೇವಾ ಪಾಕ್ಷಿಕ' ಅಭಿಯಾನವನ್ನು ಆಚರಿಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು.
ಅವರು ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
Kshetra Samachara
15/09/2022 09:21 pm