ಕಡಬ: ಐತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷರು ತಮ್ಮದೆ ಬೆಂಬಲಿತ ಪಕ್ಷದ ಸದಸ್ಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ, ಮೂರು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಈಗಾಗಲೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿ ಕೊಟ್ಟಿದ್ದಾರೆ. ಮೂರು ಮಂದಿ ಸದಸ್ಯರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವ ಪತ್ರದಲ್ಲಿ, ಐತ್ತೂರು ಗ್ರಾ.ಪಂ. ಅಧ್ಯಕ್ಷ ಶ್ಯಾಮಲನವರು ನಮ್ಮ ಕಾಂಗ್ರೆಸ್ ಪಕ್ಷದ ಬೆಂಬಲಿತರಾಗಿದ್ದರೂ ಪಂಚಾಯತ್‌ನಲ್ಲಿ ಅವರು ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ನಾಲ್ಕೈದು ತಿಂಗಳ ಹಿಂದೆಯೇ ನಿಮ್ಮ ಗಮನಕ್ಕೆ ತಂದಿದ್ದು, ತಾವು ಸುಂಕದಕಟ್ಟೆಯಲ್ಲಿ ಐದು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸೇರಿಸಿ ಮಾತುಕತೆ ನಡೆಸಿ, ಎಲ್ಲ ಪಂಚಾಯತ್ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದ್ದರೂ ಬಳಿಕ ನಿಮ್ಮ ಮಾತನ್ನು ಪಂಚಾಯತ್ ಅಧ್ಯಕ್ಷರು ನಡೆಸಿಕೊಟ್ಟಿಲ್ಲ. ಬಳಿಕ ಒಂದು ಘಟನೆಯಲ್ಲೂ ಅಧ್ಯಕ್ಷರು ಏಕಪಕ್ಷಿಯವಾಗಿ ವರ್ತಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Kshetra Samachara
16/09/2022 08:36 am