ಉಡುಪಿ: ಶಿವಮೊಗ್ಗದಲ್ಲಿ ಶಂಕಿತ ಭಯೋತ್ಪಾದಕರ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಿವಮೊಗ್ಗ ಅಂದ್ರೆ ಹಿಂದುತ್ವದ ಭದ್ರಕೋಟೆ. ಮಲೆನಾಡಿನಲ್ಲಿ ಹಿಂದೂಗಳ ಜಾಗೃತ ಸಮಾಜವಿದೆ ಆದ್ರೆ ಈಗ ಮಲೆನಾಡು ಭಯೋತ್ಪಾದಕರ ಅಡಗು ತಾಣವಾಗುತ್ತಿದೆ ಎಂದು ಹೇಳಿದ್ದಾರೆ.
ಮಾಧ್ಯಮದ ಜತೆ ಮಾತನಾಡಿದ ಅವರು, ಸರಕಾರ ಈ ಬಗ್ಗೆ ಎಚ್ಚರಿಕೆಯಿಂದಿರಬೇಕು. ಹಿಂದೂ ಭದ್ರಕೋಟೆ ಶಿಥಿಲವಾಗುತ್ತಿದೆ, ಇದು ಅಪಾಯಕಾರಿ ಬೆಳವಣಿಗೆ. ಸರಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೆ ಭಯಾನಕ ಸ್ಥಿತಿ ನಿರ್ಮಾಣವಾಗುತ್ತೆ ಎಂದು ಹೇಳಿದ್ದಾರೆ.
ಇರಾನ್‌ನಲ್ಲಿ ಹಿಜಾಬ್ ವಿರುದ್ಧ ಮಹಿಳೆಯರ ಹೋರಾಟ ವಿಚಾರವಾಗಿ ಪ್ರಶ್ನೆಗೆ ಉತ್ತರಿಸಿದ ಅವರು ಇರಾನ್ ಒಂದು ಇಸ್ಲಾಮಿಕ್ ರಾಷ್ಟ್ರ. ಇಸ್ಲಾಮಿಕ್ ರಾಷ್ಟ್ರದಲ್ಲೇ ಹಿಜಾಬನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.
ಕಟ್ಟರ್ ಮುಸ್ಲಿಂ ರಾಷ್ಟ್ರಗಳಲ್ಲಿ ಮಹಿಳೆಯರನ್ನು ಶೋಷಣೆ ಮಾಡಲಾಗುತ್ತಿದೆ. ಶಿಕ್ಷಣದಿಂದ ವಂಚಿಸಲು, ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ. ಪ್ರಾಣಿಗಳಂತೆ ಮಹಿಳೆಯರ ಜೊತೆ ವರ್ತಿಸಲಾಗುತ್ತಿದೆ. ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಕೊಲ್ಲುವ ಮೂಲಕ ಇದು ಬಯಲಾಗಿದೆ.
ಇರಾನಿನ ಮುಸ್ಲಿಂ ಮಹಿಳೆಯರು ಸಿಡಿದೆದ್ದಿದ್ದಾರೆ. ಹಿಜಾಬ್‌ನ ಪರ ನಿಂತಿರುವ ಕರ್ನಾಟಕದ ವಿದ್ಯಾರ್ಥಿನಿಯರು ಇರಾನ್ ನಿಂದ ಪಾಠ ಕಲಿಯಬೇಕು ಎಂದು ಹೇಳಿದ್ದಾರೆ.
PublicNext
20/09/2022 08:00 pm