ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಪಿ.ಎಫ್.ಐ ಬಗ್ಗು ಬಡಿಯಲಿದೆ ಸರ್ಕಾರ : ಸಚಿವ ಸುನಿಲ್ ಕುಮಾರ್

ಉಡುಪಿ : ದೇಶಾದ್ಯಂತ ಎನ್ಐಎ ದಾಳಿ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್ ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ.

ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರೂ ಮಾಡಬಾರದು

ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದರು ಎಂದು ಹೇಳಿದ್ದಾರೆ.

ಜಗತ್ತಿನ ಯಾವುದೇ ರಾಷ್ಟ್ರ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದ ಸಚಿವರು,ಭಾರತ ಹಿಂದೂ ರಾಷ್ಟ್ರ ಹಿಂದೂ ಸಂಸ್ಕೃತಿಯ ಆಧಾರದಲ್ಲೇ ರಾಷ್ಟ್ರವನ್ನು ಮತ್ತಷ್ಟು ಸಬಲಗೊಳಿಸುತ್ತೇವೆ.

ಜನರು ಕೂಡ ಇದಕ್ಕೆ ಬೆಂಬಲ ಕೊಡಬೇಕು ಎಂದು ಹೇಳಿದರು.

ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯವುದಾಗಿ ಹೇಳಿದ್ದೆ ಎಂದ ಅವರು ಕಾರ್ಯಕರ್ತರಿಗೆ ನ್ಯಾಯ ಕೊಡುವ ಭರವಸೆಯನ್ನ ನೀಡಿದ್ದೆವು.

ಪ್ರಕರಣವನ್ನು ಎನ್.ಐ.ಎ ಗೆ ಕೊಟ್ಟು ಸರ್ಕಾರ ಕೈ ಕಟ್ಟಿ ಕುಳಿತಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐಯನ್ನು ಪೋಷಿಸಿದ್ದರು.

ಸಿದ್ದರಾಮಯ್ಯ ಕಾಲದಲ್ಲಿ 18 ಹಿಂದೂಗಳ ಹತ್ಯೆಯಾಗಿತ್ತು.

ಆರೋಪಿಗಳ ಕೇಸನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿತ್ತು. ಅಶಾಂತಿ ಸೃಷ್ಟಿಸುವವರ ವಿರುದ್ಧ ಕಾಂಗ್ರೆಸ್ ಸ್ನೇಹ ಬೆಳೆಸಿತ್ತು. ಆದರೆ ಭಾರತದ ಭದ್ರತೆಯನ್ನು ಕಾಪಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಲುವಾಗಿದೆ ಎಂದು ಹೇಳಿದರು.

Edited By :
PublicNext

PublicNext

24/09/2022 01:41 pm

Cinque Terre

24.69 K

Cinque Terre

1

ಸಂಬಂಧಿತ ಸುದ್ದಿ