ಮಂಗಳೂರು: PAYCM ಕ್ಯೂಆರ್ ಕೋಡ್ ಪೋಸ್ಟರ್ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲೂ ಪ್ರತ್ಯಕ್ಷವಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧೆಡೆಗಳಲ್ಲಿ ರಾತ್ರಿ PAYCM ಪೋಸ್ಟರ್‌ಗಳನ್ನು ಅಂಟಿಸಿರುವುದು ಕಂಡುಬಂದಿತ್ತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೇ ಸ್ಟಿಕ್ಕರ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಆದರೆ ಬೆಳಗ್ಗಿನ ವೇಳೆ ಈ ಪೋಸ್ಟರ್ ಗಳೆಲ್ಲವೂ ಮಾಯವಾಗಿದೆ. ಬೆಳ್ತಂಗಡಿಯ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು. ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಚರ್ಚ್ ರೋಡಿನ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಇಂತಹ ಪೋಸ್ಟರ್ ಗಳನ್ನು ಅಂಟಿಸಲಾಗಿತ್ತು. ಪೋಸ್ಟರ್ ಗಳನ್ನು ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಅದು ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಇಂದು ಬೆಳಗ್ಗೆ PAYCMನ ಒಂದು ಪೋಸ್ಟರ್ ಇಲ್ಲದ ರೀತಿಯಲ್ಲಿ ಎಲ್ಲವನ್ನೂ ತೆರವುಗೊಳಿಸಲಾಗಿದೆ.
Kshetra Samachara
24/09/2022 02:02 pm