ಉಡುಪಿ: ಈಶ್ವರಪ್ಪ ಅವರ ಮೀಸ ಲಾತಿ ವಿರೋಧಿ ಹೇಳಿಕೆಗಳು ಮತ್ತು ಬಿ.ಸಿ.ನಾಗೇಶ್ ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುತ್ತಿರುವುದು ಬಿಜೆಪಿಯ ಧೋರಣೆಯ ಭಾಗಗಳಾಗಿವೆ. ಉತ್ಸವದಲ್ಲಿ ಪಲ್ಲಕ್ಕಿ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ದಂಡ ವಿಧಿಸುತ್ತಿರುವ ಮನಸ್ಥಿತಿಯವರು ಭಾರತವನ್ನು ಹಿಂದು ರಾಷ್ಟ್ರ ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಇವರು ಮೊದಲು ಜನರು ಬದುಕುವಂತಹ ರಾಷ್ಟ್ರವನ್ನು ನಿರ್ಮಾಣ ಮಾಡಬೇಕಾಗಿದೆ. ಅದು ಬಿಟ್ಟು ಮೋದಿ ಸ್ನೇಹಿತರಾದ ಅದಾನಿ, ಅಂಬಾನಿಯ ರಾಷ್ಟ್ರವನ್ನು ನಿರ್ಮಿಸುತ್ತಿದ್ದಾರೆ ಎಂದು ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.
ಮೀಸಲಾತಿ ವಿರೋಧಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಾತಿವಾದಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಅವರ ನಡೆ ಖಂಡಿಸಿ ಮತ್ತು ಪೂನಾ ಒಪ್ಪಂದದಿಂದ ದಲಿತರಿಗೆ ಆಗಿರುವ ಅನ್ಯಾಯ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಪ್ರತಿಭಟನಾ ಜಾಥ ಹಾಗೂ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಗರದ ಬೋರ್ಡ್ ಹೈಸ್ಕೂಲ್ನಿಂದ ಹೊರಟ ಪ್ರತಿಭಟನಾ ಜಾಥ ಹಾಗೂ ಈಶ್ವರಪ್ಪ ಹಾಗೂ ಬಿ.ಸಿ.ನಾಗೇಶ್ ಅವರ ಪ್ರತಿಕೃತಿಯ ಅಣಕು ಶವಯಾತ್ರೆಯು ಕೆ.ಎಂ.ರೋಡ್, ಕೋರ್ಟ್ ರಸ್ತೆ, ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಎದುರು ಸಮಾಪ್ತಿಗೊಂಡಿತು. ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ಹಾಗೂ ಬಿ.ಸಿ.ನಾಗೇಶ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
Kshetra Samachara
26/09/2022 03:17 pm