ಉಡುಪಿ: ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಪೇ ಸಿಎಂ ಅಭಿಯಾನ ಹಮ್ಮಿಕೊಳ್ಳಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಜೆ ವೇಳೆ ಕರಾವಳಿ ಜಂಕ್ಷನ್ ಫ್ಲೈ ಓವರ್ ಗೆ ಪೇ ಸಿಎಂ ಪೋಸ್ಟರ್ ಅಂಟಿಸಿದರು. ಯೂತ್ ಕಾಂಗ್ರೆಸ್ ನ ಹತ್ತಾರು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿ ಆಕ್ರೋಶ ಹೊರಹಾಕಿದರು.
PublicNext
26/09/2022 07:28 pm