ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಸಮಾಜದ್ರೋಹಿಗಳನ್ನು ವಿಜೃಂಭಿಸಲು ಬಿಟ್ಟಿದ್ದರು. ಬಿಜೆಪಿ ಸರ್ಕಾರ ಇವರನ್ನು ಬಿಡುವುದಿಲ್ಲ, ಯಾರ್ಯಾರು ವಿದ್ರೋಹ ಕೃತ್ಯದಲ್ಲಿ ತೊಡಗಿದ್ದವರನ್ನ ಬಗ್ಗು ಬಡೆಯುವ ಕೆಲಸವನ್ನು ಮಾಡುತ್ತೇವೆ ಎಂದು ಇಂಧನ ಸಚಿವ
ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ,
ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ ಐ ನಾಯಕರ ಹಾಗೂ ಕಾರ್ಯಕರ್ತರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ಸಮರ್ಥಿಸಿ, ಮಂಗಳೂರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಹಿಂಸೆಯ ಮುಖಾಂತರವೇ ಸಮಾಜದ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಶಕ್ತಿಗಳನ್ನು ಹದ್ದುಬಸ್ತಿನಲ್ಲಿಡುವ ಕಾರ್ಯವನ್ನು ಸರ್ಕಾರ ಮಾಡುತ್ತದೆ.
ಕಳೆದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ನಡೆದ ಹಿಂದು ಕಾರ್ಯಕರ್ತರ ಹತ್ಯೆ ಹಾಗೂ ಇತ್ತೀಚ್ಚೆಗೆ ಶಿವಮೊಗ್ಗ, ಪುತ್ತೂರಿನಲ್ಲಿ ನಡೆದ ಪ್ರಕರಣಗಳ ಹಿಂದೆ ಆ ಸಂಘಟನೆಗಳು ಇವೆ ಎಂದು ಹೇಳಲಾಗುತ್ತಿದ್ದು, ಇಡೀ ವ್ಯವಸ್ಥೆಯನ್ನು ಬುಡಮೇಲು ಮಾಡುವ ಸಂಘಟನೆಗಳಿವು.
ಇವರ ಜಾಲ ಅಂತಾರಾಷ್ಟ್ರೀಯ ಮತ್ತು ಅಂತಾರಾಜ್ಯ ಮಟ್ಟದಲ್ಲಿ ತೊಡಗಿಸಿದೆ ಎಂದರು.,
PublicNext
27/09/2022 06:31 pm