ಕೇಂದ್ರ ಸರಕಾರ ಪಿಎಫ್ಐ ಹಾಗು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿರುವುದು ಸ್ವಾಗತಾರ್ಹವಾಗಿದ್ದು, ಪಿಎಫ್ಐ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನೂ ನಿಷೇಧಿಸಬೇಕು ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಎಂಟು ವರ್ಷ ಕಳೆದಿದೆ. ಇದೀಗ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಾಗ ನಿಷೇಧದಂತಹ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು.
ಇದು ಬಿಜೆಪಿಯ ನಾಟಕವಾಗಿದ್ದು, ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರ ಮಾಡುತ್ತಿದೆ. ಕಾಂಗ್ರೆಸ್ ಹಿಂದಿನಿಂದಲೂ ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಯನ್ನು ನಿಷೇಧಿಸುವಂತೆ ಒತ್ತಾಯಿಸುತ್ತಾ ಬಂದಿದೆ. ಇದರ ಜೊತೆಗೆ ಸಮಾಜದಲ್ಲಿ ಸಾಮರಸ್ಯ ಕದಡುವ ಸಂಘಪರಿವಾರ ಸಂಘಟನೆಗಳನ್ನೂ ಬ್ಯಾನ್ ಮಾಡಬೇಕು.
ಒಂದು ಕಡೆ ರಾಷ್ಟ್ರೀಯ ಸ್ಚಯಂಸೇವಕ ಸಂಘದ ಮುಖ್ಯಸ್ಥ ದೆಹಲಿಯಲ್ಲಿ ಮುಸ್ಲಿಂ ಮುಖಂಡರನ್ನು ಭೇಟಿ ಮಾಡಿ ಅನ್ಯೋನ್ಯತೆಯ ಮಾತನಾಡುತ್ತಾರೆ. ಆದರೆ ಅದೇ ಸಂಘಟನೆಯ ಬೇರುಗಳಾದ ಭಜರಂಗದಳ, ವಿಶ್ವಹಿಂದೂ ಪರಿಷತ್ ಮತ್ತಿತರ ಸಂಘಟನೆಗಳು ಮುಸ್ಲಿಮರ ಜೊತೆ ಬೀದಿ ಕಾಳಗ ಮಾಡುತ್ತಿದ್ದು ಇದೆಲ್ಲವೂ ದೊಡ್ಡ ನಾಟಕದಂತಿದೆ ಎಂದರು.
PublicNext
28/09/2022 03:21 pm