ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಶೋಭಾ ಕರಂದ್ಲಾಜೆಯವರು ಈ ಹಿಂದೆ ರಾಜ್ಯದ ಮಂತ್ರಿಯಾಗಿ ಉತ್ತಮ ಕೆಲಸ ಕಾರ್ಯಗಳೊಂದಿಗೆ ದಕ್ಷತೆಯಿಂದ ತನ್ನ ಖಾತೆಯನ್ನು ನಿರ್ವಹಿಸಿದ ರೀತಿ ಹಾಗೂ ಈಗ ಸಂಸದೆ ಹಾಗೂ ಕೇಂದ್ರ ಸಚಿವೆಯಾಗಿ ಅತ್ಯಂತ ಪರಿಣಾಮಕಾರಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಬಗ್ಗೆ ನೇರವಾಗಿ ಚರ್ಚೆ ನಡೆಸಲು ನಾವು ಸಿದ್ದರಿದ್ದೇವೆ. ಮಿಥುನ್ ರೈ ಅವರಿಗೆ ಮಾತನಾಡಲು ಅಥವಾ ಆರೋಪ ಮಾಡಲು ಆಸಕ್ತಿ ಇದ್ದಲ್ಲಿ ನೇರವಾದ ಚರ್ಚೆಗೆ ಬರಲಿ. ಅದನ್ನು ಬಿಟ್ಟು ಪುಕ್ಕಟೆ ಪ್ರಚಾರಕ್ಕಾಗಿ ಗಾಳಿಯಲ್ಲಿ ಗುಂಡು ಹೊಡೆಯುವ ಕ್ಷುಲ್ಲಕ ರಾಜಕಾರಣಕ್ಕೆ ಕೈ ಹಾಕುವುದು ಬೇಡ. ಇದೇ ಚಾಳಿಯನ್ನು ಮತ್ತೆ ಮುಂದುವರೆಸಿದಲ್ಲಿ ಅದೇ ದಾಟಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲು ಸದಾ ಸಿದ್ಧರಿದ್ದೇವೆ ಎಂದು ಟೀಕಿಸಿದ್ದಾರೆ.
Kshetra Samachara
28/09/2022 08:57 pm