ಬೈಂದೂರು: ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯು ಗ್ರಾಮಸ್ಥರು ಮತ್ತು ಶಾಸಕ ಸುಕುಮಾರ್ ಶೆಟ್ಟಿ ಅವರ ನಡುವಿನ ವಾಗ್ವಾದಕ್ಕೆ ವೇದಿಕೆಯಾಯಿತು.
ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಬೈಂದೂರು ಗ್ರಾಮ ಪಂಚಾಯತಿಗಳನ್ನು ಒಂದುಗೊಂಡು ಪಟ್ಟಣ ಪಂಚಾಯತ್ ಆಗಿದೆ. ಆದರೆ ಪಟ್ಟಣ ಪಂಚಾಯತ್ ಆಗುವ ಮೊದಲು 94 ಸಿ, ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಸಿದ ಫಲಾನುಭವಿಗಳು ಈಗ ಅತಂತ್ರರಾಗಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕು. ಈಗಾಗಲೆ ಜನ ಪಟ್ಟಣ ಪಂಚಾಯತ್‍ಗಿಂತ ಗ್ರಾಮ ಪಂಚಾಯತ್ ಒಳ್ಳೆಯದಿತ್ತು ಎನ್ನುವ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಪ್ರಾಧಿಕಾರದ ಸಮಸ್ಯೆಯೂ ಇದಕ್ಕೆ ಕಾರಣ. ವಾರದಲ್ಲಿ ಒಂದು ಅಥವಾ ಎರಡು ದಿನ ಪ್ರಾಧಿಕಾರದ ಅಧಿಕಾರಿಗಳು ಬೈಂದೂರಿನಲ್ಲಿ ಇರುವ ಕೆಲಸ ಆಗಬೇಕು ಎಂದು ಗ್ರಾಮಸ್ಥರು ಹೇಳಿದರು.ಇದಕ್ಕೆ ಉತ್ತರಿಸಿದ ಶಾಸಕರು ,ಇದು ಭಾಷಣ ಮಾಡುವ ಸಮಯ ಅಲ್ಲ. ಬೈಂದೂರಿಗೆ 125 ಕೋಟಿ ಅನುದಾನ ಬಂದಿದೆ. ರಾಜ್ಯದಲ್ಲಿಯೇ ಹೆಚ್ಚು ಅನುದಾನ ಪಡೆದ ಕ್ಷೇತ್ರ ಬೈಂದೂರಾಗಿದೆ. ಈ ಕ್ಷೇತ್ರ ಸಾಕಷ್ಟು ಹಿಂದುಳಿದಿದ್ದುಅಭಿವೃದ್ದಿಯಾಗುತ್ತಿದೆ. ಅಧಿಕಾರಿಗಳು ಯಾವ ಕೆಲಸ ಆಗಬೇಕು, ಅನುದಾನ ಅವಶ್ಯಕತೆ ಇತ್ಯಾದಿಗಳನ್ನು ನನ್ನ ಗಮನಕ್ಕೆ ತರಬೇಕು ಎಂದು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉತ್ತರಿಸಿ ಸಮಾಧಾನಪಡಿಸಿದರು.
Kshetra Samachara
28/09/2022 10:59 pm